Political

ನಟ ಯಶ್ ಗೆ ಬಾಡಿಗೆ ದೋಖಾ; 3 ತಿಂಗಳಲ್ಲಿ ಮನೆ ಖಾಲಿ ಮಾಡುವಂತೆ ಸಿವಿಲ್ ಕೋರ್ಟ್ ಆದೇಶ

ಬೆಂಗಳೂರು: ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕಳೆದ 3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ, ವಿಚಾರಣೆ ನಡೆದು, ಬೆಂಗಳೂರಿನ 42ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಮತ್ತು ಮನೆ ಬಾಡಿಗೆ ಬಾಕಿ 9 ಲಕ್ಷ 60ಸಾವಿರ ಮನೆ ಮಾಲೀಕರಿಗೆ ನೀಡುವಂತೆ ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಹೊರಡಿಸಿದೆ.
2010ರ ಅಕ್ಟೋಬರ್ 16 ರಿಂದ ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬದವರು ಸರಿಯಾಗಿ ಬಾಡಿಗೆ ನೀಡದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Advertisements