Political

ಮತದಾನ ಅವಧಿ ಒಂದು ಗಂಟೆ ವಿಸ್ತರಣೆ: ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರ ವರೆಗೂ ಮತದಾನ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಧ್ಯಾಹ್ನ ಮತದಾನಕ್ಕೆ ಮತದಾನಕ್ಕೆ ಬರುವ ಸಾಧ್ಯತೆ ಕಡಿಮೆ ಇದೆ. ಇದಲ್ಲದೆ ಹೊಸದಾಗಿ ಈ ಬಾರಿ ವಿವಿಪಿಟಿಯನ್ನ ಅಳವಡಿಕೆ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಒಂದು ಗಂಟೆ ಮತದಾನದಲ್ಲಿ ಏರಿಕೆ ಮಾಡಲಾಗಿದೆ ಅಂತ ಮಾಹಿತಿ ನೀಡಿದರು. ಅವಧಿ ಹೆಚ್ಚಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ, ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಸಂಜೀವ್ ಕುಮಾರ್ ತಿಳಿಸಿದ್ದಾರೆ..

Advertisements