Political

ಶುಭ ಶುಕ್ರವಾರ ದಂದು ಕೈ ನಾಯಕರ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

* ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಗೊಂದಲದ ಮಧ್ಯೆಯೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬ ಗೊಂದಲ ಮುಂದಿವರಿದಿದ್ದು, ಇದರ ನಡುವೆಯೇ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

* ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದರು. ಲಕ್ಕಸಂದ್ರದ ಮಹಗಣಪನಿಗೆ ಪತ್ನಿಯೊಂದಿಗೆ ವಿಶೇಷ ಪೂಜೆ ನೆರವೇರಿಸಿದ ರಾಮಲಿಂಗಾರೆಡ್ಡಿ, ತಮ್ಮ ಬೆಂಬಲಿಗರ ಜೊತೆ ಕೊರಮಂಗಳದ ಬಿಬಿಎಂಪಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

* ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬೆಳಗ್ಗೆ ಗಾಂಧಿನಗರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಭಾರಿ ಬೆಂಬಲಿಗರೊಂದಿಗೆ ಆಗಮಿಸಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನಾ ಬಳೆಪೇಟೆಯ ಸರ್ಕಲ್ ನಲ್ಲಿ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ದರ್ಗಾಗೆ ತೆರಳಿ ಪೂಜೆ ಸಲ್ಲಿಸಿದ ದಿನೇಶ್ ಗುಂಡೂರಾವ್.

ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಗುಂಡೂರಾವ್ ಗೆ ಬರೋಬ್ಬರಿ 450 ಕೆ.ಜಿ ಹೂವಿನ ಹಾರವನ್ನು ಕ್ರೇನ್ ಮೂಲಕ ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಅಭಿಮಾನ ವ್ಯಕ್ತಪಡಿಸಿ ಬೆಂಬಲಿಗರು.

* ಚಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಮೀರ್ ಅಹ್ಮದ್ ನಾಮಪತ್ರ ಸಲ್ಲಿಕೆ.

ಇಂದು ಚಮರಾಜಪೇಟೆಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತಮ್ಮ ತಾಯಿಯೊಂದಿಗೆ ನಾಮಪತ್ರ ಸಲ್ಲಿಸುವ ಮುಂದಾದ ಜಮೀರ್ ಅಹ್ಮದ್ ಖಾನ್.

Advertisements