Political

ಏಪ್ರಿಲ್ 24ರಂದು ಸಿದ್ದು ಬಾದಾಮಿಯಿಂದ ನಾಮಪತ್ರ ಸಲ್ಲಿಕೆ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 24ರಂದು ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಕಣಕ್ಕಿಳಿಯಲಾಗುವುದು ಎಂದು ಮೇಲ್ನೋಟಕ್ಕೆ ಹೇಳುತ್ತಿರುವ ಸಿದ್ದರಾಮಯ್ಯ ಬಾದಾಮಿಯಿಂದ ಕಣಕ್ಕಿಳಿಯುತ್ತಿರುವುದು ಮಾತ್ರವಲ್ಲದೆ ಏಪ್ರಿಲ್ 24ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಬಿಜೆಪಿಯಲ್ಲಿ ಗಂಭೀರ ಚಿಂತನೆ ನಡೆಯುತ್ತಿದ್ದು, ವೀರಶೈವ-ಲಿಂಗಾಯತ ಮತಗಳ ವಿಭಜನೆ ಮಾಡಲು ಈ ಮಾಸ್ಟರ್ ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ ಎನ್ನಲಾಗಿದೆ. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸೋಲಿನ ಭಯದಿಂದ ಬಾದಾಮಿಯಲ್ಲಿ ಸ್ಪರ್ದಿಸುತ್ತಿಲ್ಲ. ಉತ್ತರ ಕರ್ನಾಟಕದ ಜನತೆಯ ಒತ್ತಾಯದ ಮೇರೆಗೆ ಸ್ಪರ್ದಿಸುತ್ತಿದ್ದೇನೆ. ಎಸ್.ಆರ್.ಪಾಟೀಲ್, ತಿಮ್ಮಪುರ್ ಅವರ ತೀವ್ರ ಒತ್ತಾಯದಿಂದ ಇಲ್ಲಿ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಪಡಿಸಬೇಕಿದೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಜನ ನನ್ನನ್ನು ಆಶೀರ್ವದಿಸಲಿದ್ದಾರೆ. ಬಾದಾಮಿಯಲ್ಲಿ ನನ್ನ ವಿರುದ್ಧ ಇತರೆ ಪಕ್ಷದವರು ಎಷ್ಟೇ ಪ್ರಬಲ ಅಭ್ಯರ್ಥಿಯನ್ನು ಹಾಕಿದರೂ ತಾವು ಕೇರ್ ಮಾಡುವುದಿಲ್ಲ ಎಂದರು.

Advertisements