Political

ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಔಟ್

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಜ್ಯಾತ್ಯಾತೀತ ಜನತಾದಳ, ತಮ್ಮ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನ ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು 57 ಅಭ್ಯರ್ಥಿಗಳ ಒಳಗೊಂಡ 2ನೇ ಪಟ್ಟಿ ರಿಲೀಸ್ ಮಾಡಿದರು. ಈ ಮುನ್ನ ಎಲ್ಲಾ ಪಕ್ಷಗಳಿಗಿಂತ ಮೊದಲು ಜೆಡಿಎಸ್ ಪಕ್ಷವು 126 ಅಭ್ಯರ್ಥಿಗಳಿರುವ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿತ್ತು.

ಟಿಕೆಟ್ ವಂಚಿತ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ಮಂದಿಗೆ ಟಿಕೆಟ್ ದೊರೆತಿದೆ. ಈಗಾಗಲೇ ಮೊದಲ ಹಂತದಲ್ಲಿ 126 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬಿ ಫಾರಂ ಕೂಡ ಅಭ್ಯರ್ಥಿಗಳಿಗೆ ನೀಡಲಾಗಿದೆ. ಬಹಳಷ್ಟು ಅಭ್ಯರ್ಥಿಗಳು ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಮೇದುವಾರಿಕೆಯನ್ನ ಸಲ್ಲಿಸಿದ್ದಾರೆ.

Advertisements