Political

ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ, ಇನ್ನು ಮುಗಿಯದ ರಾಜಕೀಯ ಪಕ್ಷಗಳ ಹೈಡ್ರಾಮ..!

ತೀವ್ರ ಕುತೂಹಲ ಕೆರಲಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿಯುವ ಸ್ಪರ್ಧೆ ಮಾಡುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸುವುದಕ್ಕೆ ಇಂದು ಕೊನೆ ದಿವಾಸವಾಗಿದೆ. ಸೋಮವಾರ ಸಂಜೆ
2264 ನಾಮಪತ್ರಗಳು ಸಲ್ಲಿಕೆಯಾಗಿದ್ದು ಒಟ್ಟು ನಮಪಾತ್ರಗಳ ಸಂಖ್ಯೆ 3000 ದಾಟುವ ನಿರೀಕ್ಷೆ ಇದೆ.
ವಿಧಾನಸಭೆ ಚುನಾವಣೆಗೆ ಸ್ಪರ್ದಿಸಿರುವ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 27ರವರೆಗೂ ಅವಕಾಶವಿದ್ದು, ಅಂದು ಸಂಜೆ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಲ್ಲಿಯವರೆಗೂ ರಾಜಕೀಯ ಪಕ್ಷಗಳ ಸ್ಪರ್ಧಾಕಾಂಕ್ಷಿಗಳ ಬಂಡಾಯ ಶಮನಗೊಳಿಸುವ ಪ್ರಯತ್ನವನ್ನು ವರಿಷ್ಠರು ಮಾಡುತ್ತಿರುತ್ತಾರೆ.

Advertisements