City News

ಉದ್ಯಾನ ನಗರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ನೆಲಕ್ಕುರುಳಿದ ಮರಗಳು

ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, 30 ನಿಮಿಷಗಳ ಕಾಲ ಗುಡುಗು ಸಹಿತ ಮಳೆ ಬಿಟ್ಟು ಬಿಡದೆ ಸುರಿದು ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ ವಾಹನ ದಟ್ಟಣೆ ಉಂಟಾಗಿದೆ.
ಮೆಜೆಸ್ಟಿಕ್, ರಾಜಾಜಿನಗರ, ಜಾಲಹಳ್ಳಿ, ಮಲ್ಲೇಶ್ವರಂ, ವಿಜಯನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಸಂಜಯನಗರ, ಯಶವಂತಪುರ, ಗೋರಗುಂಟಪಲ್ಯ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯು ಜೋರಾಗಿತ್ತು.ಅದರ ಜೊತೆಗೆ ಬಿರುಗಳಿಯ ಆರ್ಭಟ ಹೆಚ್ಚಾಗಿತ್ತು.
ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬವೊಂದು ಕಾರಿನ ಮೇಲೆ ಉರುಳಿಬಿದ್ದಿದ್ದು, ಅದರ ಸಮೀಪದಲ್ಲೇ ಮತ್ತೊಂದು ಮರ ಕಾರೊಂದರ ಮೇಲೆ ಬಿದ್ದಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 26 ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಬೆಂಗಳೂರು ನಗರ ಗರಿಷ್ಠ ಉಷ್ಣಾಂಶ 34.2 ಡಿಗ್ರಿ ಸೆಲ್ಸಿಯಸ್ ಇದ್ದು ಕನಿಷ್ಠ 23.6ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಇದೆ. ಇನ್ನು 48 ಗಂಟೆಗಳ ಕಾಲ ಮೋಡಕವಿದ ವಾತಾವರಣ ಮುಂದುವರೆಯಲಿದೆ.

Advertisements