Celebs City News Entertainment Political

Actor Puneeth Rajkumar Meets Modi ಪ್ರಧಾನಿ ಮೋದಿ ಅವರಿಗೆ ಡಾ.ರಾಜ್ ಕೃತಿ ಗಿಫ್ಟ್ ಕೊಟ್ಟ ನಟ ಪುನೀತ್ ರಾಜಕುಮಾರ್

ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನ ಇಂದು ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಪತ್ನಿಯೊಂದಿಗೆ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಡಾ.ರಾಜ್ ಜೀವನ ಚರಿತ್ರೆಯನ್ನು ಉಡುಗೊರೆಯಾಗಿ ನೀಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಹೇಳಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಚಾಮರಾಜನಗರ ಹಾಗೂ ಬೆಂಗಳೂರಿನ ಸಾರ್ವಜನಿಕ ಸಭೆಯಲ್ಲಿ ಮೋದಿಯವರು ಡಾ. ರಾಜಕುಮಾರ್ ಅವರನ್ನ ಸ್ಮರಿಸಿಕೊಂಡಿದ್ದರು. ಅವರನ್ನು ಪುನೀತ್ ಭೇಟಿಯಾದಾಗ, ಕನ್ನಡದ ಮೇರು ನಟನ ಗುಣಗಾನ ಮಾಡಿದ್ದಾಗಿ ಹೇಳಲಾಗಿದೆ.

ಸದ್ಯ, ಪವನ್ ಒಡೆಯರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ನಟ ಸಾರ್ವಭೌಮ’ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅಭಿನಯಿಸುತ್ತಿದ್ದಾರೆ. ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ..

Advertisements