Celebs City News Political

ಎಂಇಪಿ ಅಧ್ಯಕ್ಷೆ ನೌಹೇರಾ ಶೇಖ್ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

ಬೆಂಗಳೂರು: ಮಹಿಳಾ ಎಂಪವರ್ಮೆಂಟ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೇರಾ ಶೇಖ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಗೋವಿಂದಪುರದಲ್ಲಿ ಮತ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿದೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಎಂಇಪಿ ಪರ ರೋಡ್ ಶೋ ನಡೆಸುತ್ತಿದ್ದಾಗ ಸುಮಾರು 100 ಜನರ ಗುಂಪೊಂದು ಸ್ಥಳಕ್ಕೆ ಧಾವಿಸಿ ಗಲಾಟೆ ನಡೆಸಿತು. ಸಿ.ವಿ ರಾಮನ್ ನಗರ ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಘಟನೆ ಇದಾಗಿದೆ.

ಪ್ರಚಾರ ವಾಹನದ ಮೇಲೆ ದುಷ್ಕರ್ಮಿಗಳು ಗುಂಪು ಕಲ್ಲು ತೂರಿ ದಾಂಧಲೆ ನಡೆಸಿದೆ. ಘಟನೆಯಲ್ಲಿ ಎಂಇಪಿ ಯ ದಾವಣಗೆರೆಯ ಮುಖಂಡ ಅಸವುಲ್ಲ ಸೇರಿ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳಾ ಎಂಪವರ್ ಮೆಂಟ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೇರಾ ಶೇಖ್ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನೌಹೇರಾ ಶೇಖ್ ಅವರು ಗುರವಾರ ಸಂಜೆ 7ಗಂಟೆ ಸುಮಾರಿಗೆ ಸರ್ವಜ್ಞನಗರ ಪಕ್ಷದ ಅಭ್ಯರ್ಥಿ ಸಿದ್ದಾಯತ್ ಉಲ್ಲಾ ಅವರ ಪರವಾಗಿ ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದರು. ಇವರಿಗೆ ಬಿಟಿಎಂ ಲೇಔಟ್ ಕ್ಷೇತ್ರದ ಅಭ್ಯರ್ಥಿ ನರ್ಸ್ ಜಯಲಕ್ಷ್ಮಿ ಸೇರಿ ಹಲವರು ಸಾಥ್ ನೀಡಿದ್ದರು.

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಡಿಯೋ ಚಿತ್ರೀಕರಣಕ್ಕೆ ಮುಂದಾದ ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಮೇಲೂ ಕೊಡ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ..

-ರಂಜಿತಾ ಗೌಡ ನ್ಯೂಸ್ ಇಂಡಿಯಾ ಬೆಂಗಳೂರು-

Advertisements