City News Political

ಜಯನಗರದ ಬಿಜೆಪಿ ಶಾಸಕ ಬಿ.ಎನ್ ವಿಜಯ್ ಕುಮಾರ್ ವಿಧಿವಶ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ (60) ವಿಧಿವಶರಾಗಿದ್ದರೆ. ನಿನ್ನೆ ವಿಜಯನಗರದಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ ವಿಜಯ್ ಕುಮಾರ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತರುವಾಗಲೇ ಅವರ ಹೃದಯ ಬಡಿತ ಬಿಪಿ ಕುಸಿತ ಕಂಡಿತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರ ಜಯನಗರ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು. ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು. ನಿನ್ನೆ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದು ಬಿದ್ದಿದ್ದರು.
ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನ ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು. ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರ ನಾಲ್ಕನೇ ಬ್ಲಾಕ್ ನಲ್ಲಿರುವ ಅವರ ಮನೆಗೆ ತರಲಾಗಿತ್ತು.

ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ ಸದಾನಂದ ಗೌಡ ಮಾಜಿ ಸಚಿವ ಆರ್.ಅಶೋಕ್, ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಸಂಸದ ಪಿ.ಸಿ. ಮೋಹನ್, ಕಾಂಗ್ರೆಸ್ ಅಭ್ಯರ್ಥಿ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ನಗರದ ಹಲವು ಶಾಸಕರು, ಬಿಜೆಪಿ, ಕಾಂಗ್ರೆಸ್ ಮುಖಂಡರು ಪಕ್ಷಾತೀತವಾಗಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ವಿಜಯ್ ಕುಮಾರ್ ಸತ್ಯ, ನ್ಯಾಯಪರ ನಾಯಕರಾಗಿದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ..

Advertisements