City News Political

ಕುದುರೆ ವ್ಯಾಪಾರ ನಡೆಯಲು ಬಿಡಬಾರದು: ಗುಲಾಮ್ ನಬಿ ಆಜಾದ್

ಬೆಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಕೊಟ್ಟಿದ್ದಾರೆ. ನಾವು ರಾಜ್ಯಪಾಲರ ಸಂದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆ ಮಾಡಲು ಹೆಚ್ಚು ಶಾಸಕರ ಬೆಂಬಲ ಇದೆ. ಬಿಜೆಪಿಗೆ ಸಂಖ್ಯಾಬಲದ ಕೊರತೆ ಇದೆ. ಸುಪ್ರೀಂ ಕೋರ್ಟ್ ಆದೇಶ ಸಹ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ರೆ ಎರಡು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಬಹುದು ಎಂದು ಹೇಳಿದೆ. ಹೀಗಾಗಿ ಸಮಯ ವ್ಯರ್ಥ ಮಾಡದೆ ಸರ್ಕಾರ ರಚನೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.

ಕುದುರೆ ವ್ಯಾಪಾರ ನಡೆಯಲು ಬಿಡಬಾರದು. ರಾಜ್ಯಪಾಲರು ತಮ್ಮ ಅಧಿಕಾರ ಬಳಸಿ ಕೂಡಲೇ ಸರ್ಕಾರ ರಚನೆ ಮಾಡಲು ಅವಕಾಶ ಕೊಡಬೇಕು. ಕಾಂಗ್ರೆಸ್ ಜೆಡಿಎಸ್ ಸರ್ಕಾರಕ್ಕೆ ಅನುಮತಿ ನೀಡದಿದ್ದರೆ ಕಾಂಗ್ರೆಸ್‌ನಿಂದ ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗುತ್ತದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು, ಜೆಡಿಎಸ್‌ನ ಎಲ್ಲ ನಾಯಕರು ಭಾಗಿಯಾಗಲಿದ್ದಾರೆ. ಈ ಮೂಲಕ ಕಾಂಗ್ರೆಸ್- ಜೆಡಿಎಸ್ ಪಕ್ಷ ರಾಜ್ಯಪಾಲರ ಮೇಲೆ ಒತ್ತಡ ತರಲು ಮುಂದಾಗಿದೆ. ಕಾಂಗ್ರೆಸ್ ಕಾನೂನಾತ್ಮಕವಾಗಿ ಹೋರಾಟ ಮಾಡಲು ರೆಡಿಯಾಗಿದೆ ಎಂದು ಹೇಳಿದರು

Advertisements