City News

ಮಂಡ್ಯದಲ್ಲಿ ಇಂದು, ನಾಳೆ ನಿಷೇಧಾಜ್ಞೆ ಜಾರಿ

ಮಂಡ್ಯ: ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಹಾಗೂ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಭವಿಸದಂತೆ ಇಂದು ಮತ್ತು ನಾಳೆ ಮಂಡ್ಯ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿಶ್ವಾಸ ಯಾಚನೆಯಲ್ಲಿ ಸೋಲು, ಗೆಲುವಿನಿಂದಾಗಿ ಗಲಾಟೆ ನಡೆಯುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ವೀಕೆಂಡ್ ಆಗಿರುವುದರಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಈ ವೇಳೆ ಇಂದು ಮತ್ತು ನಾಳೆ ವಿಜಯೋತ್ಸವ ಆಚರಿಸುವುದು, ಗುಂಪು ಗೂಡುವುದು, ಪರ – ವಿರೋಧ ಜೈಕಾರ ಕೂಗುವುದು, ಪಟಾಕಿ ಸಿಡಿಸುವುದು ಸೇರಿದಂತೆ ಪ್ರಚೋದನಕಾರಿ ಚಟುವಟಿಕೆಗೆ ನಿಷೇಧ ಹೇರಲಾಗಿದೆ.