City News Political

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ, ಬುಧವಾರ ಪ್ರಮಾಣ ವಚನ

ಬೆಂಗಳೂರು: ಬೌಮತ ಸಾಬೀತಿಗೆ ವಿಫಲವಾದ ಬಿಜೆಪಿ ಸರ್ಕಾರ ಉರುಳಿದ್ದು ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸೋಮವಾರ ಭಾರತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಇರುವ ಕಾರಣ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಂದು ಪ್ರಮಾಣವಚನ ಕಾರ್ಯಕ್ರಮ ನಡೆಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿದೆ.

ಇನ್ನು ಮಂಗಳವಾರ ಅಷ್ಟೊಂದು ಒಳ್ಳೆಯ ದಿನವಲ್ಲದ ಕಾರಣ ಬುಧವಾರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Advertisements