City News Education Political

CM HDK & Sowmya Reddy Plants a tree on World Environment Day ವಿಶ್ವ ಪರಿಸರ ದಿನದ ಅಂಗವಾಗಿ ಹಸಿರು ಅಭಿಯಾನ: ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಿದ ಸೌಮ್ಯ ರೆಡ್ಡಿ

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ರಾಮಲಿಂಗ ರೆಡ್ಡಿ ಅವರ ಪುತ್ರಿ, ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಇಂದು ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದ ಬಳಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು.

ಜಾಗತೀಕರಣದ ಅಬ್ಬರದಲ್ಲಿ ಅರಣ್ಯವನ್ನು ಕಳೆದುಕೊಳ್ಳುತ್ತಿದ್ದು ಸಸಿಯನ್ನು ನೀಡುವುದರ ಮೂಲಕ ಪರಿಸರ ಉಳಿಸಿ, ಬೆಳೆಸಬೇಕು ಎಂದು ಸೌಮ್ಯ ರೆಡ್ಡಿ ಈ ಅಭಿಯಾನವನ್ನು ಹಮ್ಮಿಕೊಂಡಿದ್ದರು.

ಸೌಮ್ಯ ರೆಡ್ಡಿ ಅವರು ಆಯೋಜಿಸಿದ್ದ ಸಸಿ ನೆಡುವ ಅಭಿಯಾನಕ್ಕೆ ಸಿ.ಎಂ ಕುಮಾರಸ್ವಾಮಿ ಅವರು ತಮ್ಮ ಕಯ್ಯಾರೆ ಗಿಡ ನೆಟ್ಟು ಪರಿಸರ ಪ್ರೇಮವನ್ನು ಮೆರೆದು, ಪ್ರತಿಯೊಬ್ಬರೂ ಸಹ ತಮ್ಮ ಮನೆ ಮುಂದೆ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಎಂದು ಹೇಳಿದರು.
ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿ.ಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು..

Advertisements