City News Political

ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯ ಸಂಸ್ಕಾರ

ಚೆನ್ನೈ: ಭಾರಿ ಹೈಡ್ರಾಮಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಯಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು, ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಕ್ರಿಯೆಗೆ ಮದ್ರಾಸ್ ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಅಣ್ಣಾದೊರೈ, ಎಂಜಿಆರ್ ಹಾಗೂ ಜಯಲಲಿತಾ ಸಮಾಧಿಗಳು ಇರುವ ರಾಜಧಾನಿ ಚೆನ್ನೈನ ಮರೀನಾ ಬೀಚ್ನಲ್ಲಿ ಅಣ್ಣಾದೊರೈ ಸ್ಮಾರಕದ ಪಕ್ಕದಲ್ಲೇ ಕರುಣಾನಿಧಿಯವರನ್ನು ಮಣ್ಣು ಮಾಡಬೇಕೆಂದು ಡಿಎಂಕೆ ಪಟ್ಟು ಹಿಡಿದಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಹಾಗೂ ಕಾನೂನು ತೊಡಕು ಮುಂದೊಡ್ಡಿ ಮುಖ್ಯಮಂತ್ರಿ ಇ. ಪಲನಿಸ್ವಾಮಿಯವರು ಇದನ್ನು ನಿರಾಕರಿಸಿದ್ದರು.

ಇದರ ಬೆನ್ನಲ್ಲೇ ಡಿಎಂಕೆ ಕಾರ್ಯಕರ್ತರು ಹಿಂಸಾಚಾರ ನಡೆಸಿದರೆ ಎಂಬ ಕಾರಣಕ್ಕೆ ಕಾನೂನು ವಿಭಾಗದ ರಾತ್ರೋರಾತ್ರಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ನ ಹಂಗಾಮಿ ನ್ಯಾಯಮೂರ್ತಿ, ಕನ್ನಡಿಗ ಹುಲುವಾಡಿ ಜಿ.ರಮೇಶ್ ಅವರು ಈ ಅರ್ಜಿಯನ್ನು ರಾತ್ರಿಯೇ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದ್ದರು.

ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆಯೇ ಕರುಣಾನಿಧಿ ಪಾರ್ಥಿವ ಶರೀರದ ಬಳಿಯಿದ್ದ ಸ್ಟಾಲಿನ್, ಅಳಗಿರಿ, ಕನಿಮೋಲಿ ಹಾಗೂ ದಯಾನಿಧಿ ಮಾರನ್ ಅವರು ಕಣ್ಣೀರಿಟ್ಟರು. ಈ ನಡುವೆ ನ್ಯಾಯಾಲಯದ ತೀರ್ಪಿನಿಂದ ಡಿಎಂಕೆ ಕಾರ್ಯಕರ್ತರು ಕೂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ..

Advertisements